ಮಂಗಳೂರು,ಜ 02 (DaijiworldNews/MS): ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳುಗಾರಿಕೆಗೆಯ ಕಡಿವಾಣಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ಅನಧಿಕೃತ ಮರಳುಗಾರಿಕೆಗೆ ಸಂಬಂಧಿಸಿದಂತೆ, ಯಾವುದೇ ದೂರು ನೀಡಬೇಕಾದಲ್ಲಿ ಸಾರ್ವಜನಿಕರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ದೂರವಾಣಿ ಸಂಖ್ಯೆ: 8762339932 ಸಂಪರ್ಕಿಸಬಹುದು.
ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಣಿಕೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಮರಳಿನ ಬೇಡಿಕೆಗಳನ್ನು ಪೂರೈಸುವ ಸಲುವಾಗಿ ಈ ಹಿಂದೆ ಜಾರಿಯಲ್ಲಿದ್ದ https://dksandbazar.com ಆ್ಯಪ್ ತಂತ್ರಾಂಶವನ್ನು ಪುನರ್ ಸ್ಥಾಪಿಸಲಾಗಿದೆ.
ಜನವರಿ 02 ರಿಂದ ಸಾರ್ವಜನಿಕರು ಈ ಆ್ಯಪ್ನ ಮೂಲಕ ಸಾಮಾನ್ಯ ಮರಳನ್ನು ನೇರವಾಗಿ ಖರೀದಿಸಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.