ಉಡುಪಿ, ಜ 05 (DaijiworldNews/HR): ಆಟೋ ಚಲಿಸುತ್ತಿದ್ದ ವೇಳೆಯೇ ಚಾಲಕರೊಬ್ಬರಿಗೆ ಹೃದಯಾಘಾತ ಸಂಭವಿಸಿದ್ದು, ಆಟೋ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಇಬ್ಬರು ಮಹಿಳಾ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಕಾಡುಬೆಟ್ಟುವಿನ ಸುರೇಶ್ ಅವರು ರಿಕ್ಷಾದಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರನ್ನು ಅಜ್ಜರಕಾಡುನಿಂದಉಡುಪಿ ಬಸ್ ನಿಲ್ದಾಣಕ್ಕೆ ಕರೆದೊಯ್ಯುತ್ತಿದ್ದ ವೇಳೆ ಹಠಾತ್ ಹೃದಯಘಾತವಾಗಿ ಕುಸಿದು ಬಿದ್ದಿದ್ದಾರೆ.
ಇನ್ನು ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಇನ್ನೋರ್ವ ರಿಕ್ಷಾ ಚಾಲಕ ಮತ್ತು ಇತರರು ತಕ್ಷಣ ಸುರೇಶ್ ಅವರನ್ನು ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.