ಪುತ್ತೂರು, ಜ 06 (DaijiworldNews/MS): ಕೆಮ್ಮಿಂಜೆ ಗ್ರಾಮದ ಇಡಬೆಟ್ಟು ಸಮೀಪದ ಕರೆಜ್ಜದಲ್ಲಿ ವಿವಾಹಿತ ಮಹಿಳೆಗೆ ದಿಗ್ಬಂಧನ ವಿಧಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪತಿ ಶ್ರೀಪತಿ ಹೆಬ್ಬಾರ್ ವಿರುದ್ಧ ದ.ಕ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯ ಸಹೋದರ ಬಂಟ್ವಾಳ ತಾಲೂಕಿನ ವಿಟ್ಲ ಕಸಬಾ ನಿವಾಸಿ ಲೋಕೇಶ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ
ಏನಾಗಿತ್ತು?
ಬಾಣಸಿಗ ಶ್ರೀಪತಿ ಹೆಬ್ಬಾರ್ ಎಂಬುವರ ಪತ್ನಿ ಆಶಾಲತಾ ಅವರನ್ನು ಮನೆಯ ಪಕ್ಕದ ಸಿಮೆಂಟ್ ಶೀಟ್ ಅಳವಡಿಸಿರುವ, ಕಿಟಕಿ, ವಿದ್ಯು ತ್ ಬೆಳಕಿನ ವ್ಯವಸ್ಥೆಇಲ್ಲದ ಕೋಣೆಯಲ್ಲಿ ಮೂರು ತಿಂಗಳಿನಿಂದ ಕೂಡಿ ಹಾಕಲಾಗಿದೆ ಎಂದು ಅಜ್ಞಾತ ವ್ಯಕ್ತಿಯೊಬ್ಬರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ದೂರು ನೀಡಿದ್ದರು.ಇಲಾಖೆಯ ಮೇಲ್ವಿಚಾರಕರ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಮಹಿಳೆ ಎದ್ದು ನಡೆಯಲಾಗದ ಮತ್ತು ಸರಿಯಾಗಿ ಮಾತನಾಡಲಾಗದ ಸ್ಥಿತಿಯಲ್ಲಿದ್ದು ಚಿಕಿತ್ಸೆ ಆಸ್ಪತ್ರೆಗೆ ದಾಖಲಿಸಿದ್ದರು.
ಶುಕ್ರವಾರ ಪೊಲೀಸರು, ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಅಧಿಕಾರಿಗಳು ಶ್ರೀಪತಿ ಹೆಬ್ಟಾರ್ ಅವರ ಮನೆಗೆ ಭೇಟಿ ನೀಡಿದ್ದು ಆಶಾಲತಾ ಅವರನ್ನು ಮನೆಗೆ ಕರೆದುಕೊಂಡು ಬಂದು ಉಪಚರಿಸುವಂತೆ ಹೇಳಿದ್ದಾರೆ. ಈ ವೇಳೆ ಮನೆ ಮಂದಿಯು ಈ ಹಿಂದೆ ಇದ್ದ ಕೊಠಡಿಯೊಳಗೆ ಆಕೆಯನ್ನು ಹಾಕುತ್ತೇವೆ. ಮನೆಯೊಳಗೆ ಸಾಧ್ಯ ಇಲ್ಲ ಎಂದು ಉತ್ತರಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.