ಕಾಸರಗೋಡು, ಜ 10 (DaijiworldNews/MS): ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ (48) ಇಂದು ಬೆಳಿಗ್ಗೆ ಮಾವುಂಗಾಲ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮನೆಯಲ್ಲಿ ಕುಸಿದುಬಿದ್ದ ವಿನೋದ್ ರವನ್ನು ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿದರೂ ಫಲಕಾರಿಯಾಗಲಿಲ್ಲ.
ಪುಲ್ಲೂರು ನಿವಾಸಿಯಾಗಿದ್ದ ವಿನೋದ್ ರವರು ಕೆ ಎಸ್ ಯು ಮೂಲಕ ಸಕ್ರಿಯ ರಾಜಕೀಯಕ್ಕೆ ಧುಮುಕಿದರು. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಗಿ ಸೇವೆ ಸಲ್ಲಿಸಿದ್ದ ಇವರು, ಬಳಿಕ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.