ಬೆಳ್ಳಾರೆ, ಜ 11 (DaijiworldNews/MS): ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದು, ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಸುಳ್ಯ ಕಳಂಜ ಗ್ರಾಮದ ನಿವಾಸಿ ರಾಜೇಶ ಎಂದು ಗುರುತಿಸಲಾಗಿದೆ. ಈತನ ವಿರುದ್ದ 2019 ರಲ್ಲಿ ಪೋಕ್ಸೋ ಕಾಯಿದೆಯಡಿಯಲ್ಲಿ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು ಕಳಂಜ ಗ್ರಾಮದ ಕಿಲಂಗೋಡಿ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬೆಳ್ಳಾರೆ ಠಾಣಾ ಪಿಎಸ್ಐ ಅಶೋಕ್ ಸಿ ಎಮ್ ಹಾಗೂ ಸಿಬ್ಬಂದಿಗಳಾದ ಪ್ರವೀಣ ಬಾರ್ಕಿ ಮತ್ತು ಸಂತೋಷ್ ಕೆ ಜಿ ಭಾಗವಹಿಸಿದ್ದರು.