ಮಂಗಳೂರು, ಜ 12 (DaijiworldNews/MS): ಮಂಗಳೂರು ಜಿಲ್ಲಾ ಕಾರಾಗ್ರೃಹದಲ್ಲಿ ಸಸಿಗಳ ಮಾರಾಟಕ್ಕೆ ನರ್ಸರಿ ಸ್ಥಾಪಿಸುವ ನಿಟ್ಟಿನಲ್ಲಿ ಗುರುವಾರ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.
ಕಾರಾಗ್ರೃಹದ ಮುಂಭಾಗದ ಆಭರಣದಲ್ಲಿ ನರ್ಸರಿ ಸ್ಥಾಪನೆಗೆ ಸೂಕ್ತವಾಗಿದೆ ಎಂದು ಪರಿಶೀಲನೆಯಲ್ಲಿ ಅಂತಿಮಗೊಳಿಸಲಾಗಿದೆ.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್, ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕಾ ಉಪನಿರ್ದೇಶಕ ಎಚ್.ಆರ್. ನಾಯಕ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಕಾರಾಗ್ರಹ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಇದ್ದರು.
ಜಿಲ್ಲಾ ಕಾರ್ಯಗ್ರಹದಲ್ಲಿ ಕೈದಿಗಳು ವಿವಿಧ ರೀತಿಯ ಹಣ್ಣು, ತರಕಾರಿ, ಅಲಂಕಾರಿಕ ಗಿಡಗಳನ್ನು ಬೆಳೆಸಿದ್ದಾರೆ. ಕಾರಾಗ್ರೃಹದ ಹಿಂಭಾಗದ ಖಾಲಿ ಜಾಗದಲ್ಲಿ ಉತ್ತಮ ನೀರಿನ ವ್ಯವಸ್ಥೆಯೊಂದಿಗೆ ಗಿಡಮರಗಳನ್ನು ಬೆಳೆಸಲಾಗಿದೆ. ಬುಧವಾರ ಕಾರಾಗ್ರೃಹದಲ್ಲಿ ಕನ್ನಡ ಸಂಸ್ಕøತಿ ಇಲಾಖೆಯಿಂದ ಏರ್ಪಡಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿಗಳು ಗಿಡಮರಗಳ ನರ್ಸರಿ ವೀಕ್ಷಿಸಿ, ಅತೀವ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅಲ್ಲದೆ ಕಾರ್ಯಗ್ರಹದಲ್ಲಿ ಸಸಿಗಳ ಮಾರಾಟಕ್ಕೆ ನರ್ಸರಿ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು.