ಮಂಗಳೂರು, ಜ 13 (DaijiworldNews/AA): ತಾಳಿ ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮೂಡಬಿದರೆ ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಬ್ರಹ್ಮಾವರದ ಆರೂರಿನ ಬೆಳ್ಮಾರು ನಿವಾಸಿ ದೀಕ್ಷಿತ್ (27) ಬಂಧಿತ ಆರೋಪಿ. ಈತನಿಂದ ಸುಮಾರು ರೂ. 50,000 ಮೌಲ್ಯದ ಬಂಗಾರದ ತಾಳಿ ಸರ ಮತ್ತು ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಾಳಿ ಸರ ಕಳವಿಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ದ ಮೂಡಬಿದರೆ ಠಾಣೆಯಲ್ಲಿ ಐಪಿಸಿ ಸೆಕ್ಷನ್ 380 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಯ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ 2016ರ ಜ. 12 ರಂದು ಐಪಿಸಿ ಸೆಕ್ಷನ್ 454, 380 ರ ಅಡಿಯಲ್ಲಿ ಹಾಗೂ 2023ರ ಜ. 7 ರಂದು ಐಪಿಸಿ ಸೆಕ್ಷನ್ 457, 380, 511 ರ ಅಡಿಯಲ್ಲಿ ಮತ್ತು ಮಣಿಪಾಲ ಪೊಲೀಸ್ ಠಾಣೆಯಲ್ಲಿ 2023 ರ ಅ. 3 ರಂದು ಐಪಿಸಿ ಸೆಕ್ಷನ್ 380 ರ ಅಡಿಯಲ್ಲಿ ಪ್ರಕರಣಗಳು ದಾಖಲಾಗಿದೆ.
ಇನ್ನು ಈ ಕಾರ್ಯಾಚರಣೆಯನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್, IPS ರವರ ಮಾರ್ಗದರ್ಶನದಂತೆ, DCP ಸಿದ್ದಾರ್ಥ ಗೊಯಲ್ IPS (ಕಾ&ಸು), ದಿನೇಶ್ ಕುಮಾರ್ DCP (ಅ&ಸಂ), ಮತ್ತು ಮಂಗಳೂರು ಉತ್ತರ ಉಪ ವಿಭಾಗದ ACP ಮನೋಜ್ ಕುಮಾರ್ ನಾಯ್ಕ್ ರವರ ನಿರ್ದೇಶನದಂತೆ ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಮೂಡಬಿದ್ರೆ ಠಾಣಾ ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ.ಜಿ ಮತ್ತು ದಿವಾಕರ್ ರೈ, ಪೊಲೀಸ್ ಉಪ ನಿರೀಕ್ಷಕರಾದ ಸಿದ್ದಪ್ಪ ನರನೂರು ಹಾಗೂ ಠಾಣಾ ಅಪರಾಧ ವಿಭಾಗದ ಸಿಬ್ಬಂದಿಯವರಾದ ಮೊಹಮ್ಮದ್ ಇಕ್ಬಾಲ್, ನಾಗರಾಜ್ ಲಮಾಣಿ, ಅಕೀಲ್ ಅಹಮ್ಮದ್, ಚಂದ್ರಹಾಸ ರೈ ಮತ್ತು ವೆಂಕಟೇಶ್ ಅವರು ಪಾಲ್ಗೊಂಡಿದ್ದಾರೆ.