ಉಡುಪಿ, ಜ 16 (DaijiworldNews/MS): 'ಕೊಂಕಣ ರೈಲ್ವೇ' ನಿಯಮಿತವಾಗಿ ಪ್ರಯಾಣಿಕರ ಟಿಕೆಟ್ ತಪಾಸಣೆ ಮಾಡುತ್ತಿದ್ದು, ಕಳೆದ ಡಿಸೆಂಬರ್ ಒಂದೇ ತಿಂಗಳಲ್ಲಿ ರೈಲುಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸುತಿದ್ದ ಒಟ್ಟು 6,675 ಮಂದಿ ಪ್ರಯಾಣಿಕರಿಂದ 1,95,64,926ರೂ. ದಂಡವನ್ನು ವಸೂಲಿ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.
ಕಳೆದ ತ್ರೈಮಾಸಿಕದಲ್ಲಿ (2023ರ ಅಕ್ಟೋಬರ್ನಿಂದ ಡಿಸೆಂಬರ್ ತನಕ) ಟಿಕೆಟ್ ರಹಿತ ಪ್ರಯಾಣಿಸುತ್ತಿದ್ದ 18,466 ಮಂದಿ ಪ್ರಯಾಣಿಕರನ್ನು ರೈಲ್ವೆ ಅಧಿಕಾರಿಗಳು ಪತ್ತೆ ಹಚ್ಚಿದ್ದು, ಅವರಿಂದ ಒಟ್ಟು 5,60,99,017 ರೂ ದಂಡ ವಸೂಲಿ ಮಾಡಿದ್ದಾರೆ ಎಂದೂ ಪ್ರಕಟಣೆಯಲ್ಲಿ ವಿವರಿಸಲಾಗಿದೆ.
ಕೊಂಕಣ ರೈಲ್ವೆಯಲ್ಲಿ ಪ್ರಯಾಣಿಸುವ ಪ್ರಯಾಣಿಕರು ಸರಿಯಾದ ಟಿಕೆಟ್ ನೊಂದಿಗೆ ಪ್ರಯಾಣಿಸುವಂತೆ ಮನವಿ ಮಾಡಿ ರುವ ಅಧಿಕಾರಿಗಳು, ಪ್ರಯಾಣದ ನಡುವೆ ಉಂಟಾಗುವ ಅನಾನುಕೂಲತೆ ತಪ್ಪಿಸಲು ನೆರವಾಗುವಂತ ಕೋರಿದ್ದಾರೆ. ಕೆಆರ್ಸಿಎಲ್ನ ಮಾರ್ಗದಲ್ಲಿ ಮುಂದೆಯೂ ನಿರಂತರವಾಗಿ ಟಿಕೆಟ್ ತಪಾಸಣೆ ಪ್ರಕ್ರಿಯೆ ಮುಂದುವರಿಯಲಿದೆ ಎಂದುತಿಳಿಸಿದೆ.