ಮಂಗಳೂರು,ಜ 20(DaijiworldNews/RA): ಆಟೋ ರಿಕ್ಷಾದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಜ.18 ರಂದು ಬಂಧಿಸಿದ್ದಾರೆ.
ಬಂಧಿತನನ್ನು ಬಜಾಲ್ ನಂತೂರು ಕೆಳಗಿನ ಮನೆ ನಿವಾಸಿಯಾಗಿದ್ದಾನೆ ತೌಸೀಫ್ ಯಾನೆ ತೌಚಿ ( 23) ಎಂದು ಗುರುತಿಸಲಾಗಿದೆ.
ಈತನಿಂದ ಒಟ್ಟು 45 ಸಾವಿರ ರೂ. ಮೌಲ್ಯದ 9 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಹಾಗೂ ಆಟೋರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಮೌಲ್ಯ ಒಟ್ಟು 5,11,000 ರೂಪಾಯಿ ಎಂದು ಅಂದಾಜಿಸಲಾಗಿದೆ.
ಈತ ಆಟೋ ರಿಕ್ಷಾದಲ್ಲಿ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಬಂಧಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಶ್ರೀ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.