ಮಂಗಳೂರು, ಜ 22 (DaijiworldNews/AA): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರದಂದು 6 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಬ್ಬ ಸೋಂಕಿತ ಮೃತಪಟ್ಟಿರುತ್ತಾರೆ.
ಒಟ್ಟು 159 ಜನರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿತ್ತು. ಸದ್ಯ ಜಿಲ್ಲೆಯಲ್ಲಿ 13 ಸಕ್ರಿಯ ಪ್ರಕರಣಗಳಿದ್ದು, ನಿನ್ನೆ ಆಸ್ಪತ್ರೆಯಿಂದ ಇಬ್ಬರು ಬಿಡುಗಡೆಯಾಗಿದ್ದಾರೆ.
ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 62 ವರ್ಷದ ಮಹಿಳೆಯೊಬ್ಬರು ಸ್ಟ್ರೋಕ್ ಹಿನ್ನೆಲೆ ಸಾವನ್ನಪ್ಪಿದ್ದಾರೆ. ಅವರನ್ನು ಕೋವಿಡ್ ತಪಾಸಣೆಗೆ ಒಳಪಡಿಸಿದ ವೇಳೆ ಸೋಂಕು ದೃಢಪಟ್ಟಿರುವುದಾಗಿ ವರದಿ ಬಂದಿತ್ತು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.