ಉಡುಪಿ, ಜ 24 (DaijiworldNews/ AK):ರಾಮ ಮಂದಿರ ಪ್ರಾಣ ಪ್ರತಿಷ್ಠೆ ದಿನ ರಾಮಧ್ವಜ ಅಳವಡಿಸದ ಹಿನ್ನಲೆ ಉಡುಪಿ ಬನ್ನಂಜೆ ನಾರಾಯಣಗುರು ಮಂದಿರಕ್ಕೆ ಅವಾಚ್ಯ ಶಬ್ದಗಳ ಬಳಸಿ ನಿಂದಿಸಿದ ಅನಾಮಿಕ ವ್ಯಕ್ತಿ ವಿರುದ್ಧ ಮಂದಿರದ ಆಡಳಿತ ಮಂಡಳಿಯಿಂದ ಎಸ್ಪಿಗೆ ದೂರು ನೀಡಿದರು.
ಈ ವೇಳೆ ಆರೋಪಿ ಯಾರೆಂದು ಕೂಡಲೇ ಪತ್ತೆ ಹಚ್ಚುವಂತೆ ಮನವಿ ಮಾಡಿದರು.ಅಲ್ಲದೇ ನಿಂದಿಸಿದ ವ್ಯಕ್ತಿ ಕ್ಷೇತ್ರಕ್ಕೆ ಬಂದು ಕ್ಷಮೆ ಯಾಚಿಸಬೇಕು.ನಿಂದಿಸಲು ಕಾರಣ ಏನು ಎಂಬುದನ್ನು ನಮಗೆ ಮನವರಿಕೆ ಮಾಡಬೇಕು ಎಂದು ಮನವಿ ಮಾಡಿದರು.
ಬನ್ನಂಜೆ ನಾರಾಯಣ ಗುರು ಸಂಘ 80 ವರ್ಷದಿಂದ ಸಾಮಾಜಿಕ ಚಟುವಟಿಕೆ ಮಾಡುತ್ತಿದೆ.ಶೈಕ್ಷಣಿಕವಾಗಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಮಾಡುವ ಕೆಲಸ ಮಾಡುತ್ತಿದೆ
ರಾಮಮಂದಿರ ಪ್ರತಿಷ್ಠಾಪನೆ ದಿನ ನಾವು ವಿಶೇಷ ಪೂಜೆ ನೆರವೇರಿಸಿದ್ದೇವೆ.ಮಂದಿರದ ಆವರಣದಲ್ಲಿ ಧ್ವಜ ಮಾತ್ರ ಅಳವಡಿಸಿರಲಿಲ್ಲ ಎಂದುಬನ್ನಂಜೆ ರಾಮಮಂದಿರ ಅಧ್ಯಕ್ಷ ಮಾಧವ ಬನ್ನಂಜೆ ಹೇಳಿದರು.
ಇನ್ನು ದೂರು ಸ್ವೀಕರಿಸಿ ಮಾತನಾಡಿದ ಉಡುಪಿ ಎಸ್.ಪಿ ಡಾ. ಅರುಣ್ , ಬನ್ನಂಜೆ ನಾರಾಯಣ ಗುರು ಮಂದಿರದ ಆಡಳಿತಮಂಡಳಿ ಮನವಿ ನೀಡಿದ್ದಾರೆ.ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ ಎಂದು ದೂರಿದ್ದಾರೆ.ಕಾನೂನು ತಜ್ಞರ ಸಲಹೆ ಪಡೆಯುತ್ತೇವೆ. ಎಫ್ ಐ ಆರ್ ಮಾಡುವ ಬಗ್ಗೆ ಚಿಂತನೆ ನಡೆಸುತ್ತೇವೆ.ಈ ಬಗ್ಗೆ ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ.ದೂರಿನ ಅದರ ಮೇಲೆ ತಾಂತ್ರಿಕವಾಗಿ ತನಿಖೆಯನ್ನು ನಡೆಸುತ್ತೇವೆ ಎಂದು ಭರವಸೆ ನೀಡಿದರು.