ಕಾಸರಗೋಡು,: ಜಿಲ್ಲಾಡಳಿತದ ವತಿಯಿಂದ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಉನ್ನತ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಖಾತೆ ಸಚಿವೆ ಆರ್. ಬಿಂದು ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಗಣರಾಜ್ಯೋತ್ಸವ ಸಂದೇಶ ನೀಡಿದರು.
ಸಂವಿಧಾನದ ಭರವಸೆಯ ಮೌಲ್ಯಗಳನ್ನು ಸಂರಕ್ಷಿಸಬೇಕು, ಸಮಾಜದ ಕಟ್ಟಕಡೆಯ ವ್ಯಕ್ತಿಗಳ ಉನ್ನತಿಗೆ ಆದ್ಯತೆ ನೀಡಬೇಕು ಎಂದು ಸಾಮಾಜಿಕ ನ್ಯಾಯ ಮತ್ತು ಉನ್ನತ ಶಿಕ್ಷಣ ಸಚಿವ ಆರ್. ಬಿಂದು ಹೇಳಿದರು.
ವಿದ್ಯಾನಗರ ನಗರಸಭಾ ಸ್ಟೇಡಿಯಂನಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಇಂಪಾಶೇಖರ್ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಪಿ. ಬಿಜೋಯ್ ಹಾಗೂ ಸಂಸದ ರಾಜಮೋಹನ್ ಉಣ್ಣಿತ್ತಾನ್ ಗೌರವ ವಂದನೆ ಸ್ವೀಕರಿಸಿದರು. ಶಾಸಕರಾದ ಎಕೆಎಂ ಅಶ್ರಫ್ ಎನ್ ಎ ನೆಲ್ಲಿಕುನ್ನು ,ಸಿಎಚ್ ಕುಂಞಿಂಬು, ಇ ಚಂದ್ರಶೇಖರನ್ ,ಎಂ ರಾಜಗೋಪಾಲನ್ ಜಿಲ್ಲಾ ಪಂಚಾಯ ತ್.ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಮುಖ್ಯ ಅತಿಥಿಗಳಾಗಿದ್ದರು.ಎಡಿಎಂಕೆ ನವೀನ್ ಬಾಬು, ಸಹಾಯಕ ಜಿಲ್ಲಾಧಿಕಾರಿ ದಿಲೀಪ್ ಕೈನಿಕರ, ಆರ್ಡಿಒ ಅತುಲ್ ಸ್ವಾಮಿನಾಥ ಮತ್ತಿತರರು ಭಾಗವಹಿಸಿದ್ದರು