ಮಂಗಳೂರು, ಜ 26 (DaijiworldNews/HR): ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಶಾಸಕ ಕೆ. ವಸಂತ್ ಬಂಗೇರ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಬೆಳ್ತಂಗಡಿ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವಸಂತ್ ಬಂಗೇರ ಅವರು ಎಐಸಿಸಿ ಸದಸ್ಯರಾಗಿಯೂ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ. ಅವರು ಶೀಘ್ರ ಗುಣಮುಖರಾಗಲೆಂದು ಆಶಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.