ಮಂಗಳೂರು,ಏ24(Daijiworld News/AZM): ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಕಾಂಗ್ರೆಸ್ ಮುಖಂಡ, ಮಂಗಳೂರು ಮಹಾನಗರ ಪಾಲಿಕೆಯ ಬೋಳೂರು ವಾರ್ಡಿನ ಮಾಜಿ ಕಾರ್ಪೋರೇಟರ್ ರಾಧಾಕೃಷ್ಣ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಅವರು ಪಕ್ಷದಿಂದ ವಜಾ ಮಾಡಿದ್ದಾರೆ.
ಮಾಜಿ ಕಾರ್ಪೋರೇಟರ್ ರಾಧಾಕೃಷ್ಣ
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ರಾಧಾಕೃಷ್ಣ ಅವರು ತಮ್ಮನ್ನು ತೊಡಗಿಸಿಕೊಂಡಿದ್ದಲ್ಲದೆ, ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಮಿಥುನ್ ರೈ ವಿರುದ್ಧ ಹೇಳಿಕೆಗಳನ್ನು ನೀಡಿ ಪಕ್ಷದ ತತ್ವ ಸಿದ್ಧಾಂತಗಳನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಪಕ್ಷದಲ್ಲಿ ನೀಡಿರುವ ಹುದ್ದೆಗಳಿಂದ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಜಿಲ್ಲಾಧ್ಯಕ್ಷ ಕೆ ಹರೀಶ್ ಕುಮಾರ್ ಅವರು ವಜಾಗೊಳಿಸಿದ್ದಾರೆ ಎಂದು ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.