ಉಡುಪಿ, ಫೆ 12 (DaijiworldNews/HR): ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಅನ್ನು ಪೊಲೀಸರು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ನವೆಂಬರ್ 12 ರಂದು ಒಂದೇ ಕುಟುಂಬದ ಹಸೀನಾ ಮತ್ತು ಮೂವರು ಮಕ್ಕಳ ಕೊಲೆ ನಡೆದಿದ್ದು, ಮಲ್ಪೆ ಠಾಣಾ ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆಯಾಗಿತ್ತು.
ಇನ್ನು ಈಗಾಗಲೇ ತನಿಖೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಮತ್ತು ಚಾರ್ಜ್ ಶೀಟ್ ಸಲ್ಲಿಸಲು ಫೆ.12 ಕೊನೆಯ ದಿನವಾಗಿರುವುದರಿಂದ ಶನಿವಾರ ಪ್ರಕರಣದ ತನಿಖಾಧಿಕಾರಿಯಾಗಿರುವ ಮಲ್ಪೆ ವೃತ್ತ ನಿರೀಕ್ಷಕರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಈ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ.