ಬಂಟ್ವಾಳ, ಫೆ 13 (DaijiworldNews/HR): ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಅಬ್ದುಲ್ ಮಜೀದ್ ಅವರ ಮಗ ಮಹಮ್ಮದ್ ಸಮೀವುಲ್ಲಾ ಹಾಗೂ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕಂಚಿಲ ನಿವಾಸಿ ಮೋಯ್ದು ಕುಂಞಿ ಅವರ ಮಗ ಇಬ್ರಾಹಿಂ ಬಂಧಿತ ಆರೋಪಿಗಳು.
ಫೆ.12 ರಂದು ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಬಿ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷರಾದ ಮೂರ್ತಿ ಸಿಬ್ಬಂದಿಗಳಾದ ಹೆಚ್ ಸಿ ಕೃಷ್ಣ ಮತ್ತು ಪಿ ಸಿ ಯೋಗೇಶ್ ಡಿ ಎಲ್ , ಪುನೀತ್ ರವರು ಮಾಹಿತಿ ಸಂಗ್ರಹಿಸಿ ಬೆಂಗಳೂರಿನಿಂದ ದಸ್ತಗಿರಿ ಮಾಡಿದ್ದಾರೆ.
ಆರೋಪಿಗಳನ್ನು ಮಂಗಳೂರಿನ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಜರು ಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನದ ವಿಧಿಸಿದೆ.