ಕಾಸರಗೋಡು, ಫೆ 13 (DaijiworldNews/HR): ಕುಬಣೂರಿನಲ್ಲಿರುವ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಸೋಮವಾರ ರಾತ್ರಿ ಅಗ್ನಿ ಅನಾಹುತ ಉಂಟಾಗಿದ್ದು, ಪರಿಸರ ವಿಡಿ ಹೊಗೆಯಿಂದ ಅವೃತ್ತವಾಗಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟಿದ್ದಾರೆ.
ಉಪ್ಪಳ, ಕಾಸರಗೋಡು ಹಾಗೂ ತ್ರಕ್ಕರಿ ಪುರದಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳ ಕ್ಕಾಮಿಸಿ ಬೆಂಕಿಯನ್ನು ನಂದಿಸಿದರು. ಯಾವುದೇ ಅಹಿತಕರ ಘಟನೆ ನಡೆದ ಬಗ್ಗೆ ವರದಿಯಾಗಿಲ್ಲ. ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ರವರ ನೇತೃತ್ವದಲ್ಲಿ ಬೆಂಕಿ ನಂದಿಸುವ ಕಾರ್ಯ ನಡೆಯಿತು.
ಇನ್ನು ಬೆಂಕಿ ಅನಾಹುತದ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಜಿಲ್ಲಾ ಧಿಕಾರಿ ಆದೇಶ ನೀಡಿದರು. ಪರಿಸರದಲ್ಲಿ ದೂರ್ವಾಸ ನೆಯ ಹೊಗೆ ಆವರಿಸಿದ್ದು, ತುರ್ತು ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾ ವೈದ್ಯಾಧಿಕಾರಿಗೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಬೆಳಿಗ್ಗೆ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಅವರು ವಿಪತ್ತು ನಿವಾರಣಾ ಪ್ರಾಧಿಕಾರದ ಸಭೆ ಕರೆದಿದ್ದಾರೆ.