ಮಂಗಳೂರು, ಫೆ 15 (DaijiworldNews/MS): ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಫೆ 14ರ ಬುಧವಾರ ವಶಪಡಿಸಿಕೊಂಡಿದ್ದಾರೆ.
ಅಬುದಾಭಿಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರ ಹ್ಯಾಂಡ್ ಬ್ಯಾಗ್ ನ್ನು ಸ್ಕ್ಯಾನ್ ಮಾಡಿದಾಗ ಅಧಿಕಾರಿಗಳು ಅನುಮಾನಗೊಂಡಿದ್ದು, ಅವರನ್ನು ವಿಚಾರಣೆಗೊಳಪಡಿಸಿ, ತಪಾಸಣೆಗೊಳಪಡಿಸಿದಾಗ 8,06,400 ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧತೆಯ 128ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮೊಬೈಲ್ ಬ್ಯಾಕ್ ಕವರ್ ನಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಬುಧವಾರ ದುಬೈನಿಂದ ಮುಂಬೈಗೆ ಬಂದಿಳಿದು ಅಲ್ಲಿಂದ ಮಂಗಳೂರಿಗೆ ಬಂದಿಳಿದ ಪ್ರಯಾಣಿಕರೊಬ್ಬನ್ನು ತಪಾಸಣೆ ಮಾಡಿದಾಗ ಟ್ರಾಲಿ ಬ್ಯಾಗ್ ನಲ್ಲಿದ್ದ ಲಕೋಟೆಯಲ್ಲಿ 11,90,700 ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧತೆಯ 189 ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.