ಉಪ್ಪಿನಂಗಡಿ, ಫೆ 15 (DaijiworldNews/MS): ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ವಿದ್ಯಾರ್ಥಿಯನ್ನು ಅತ್ತಾವುಲ್ಲಾ ಎಂದು ಗುರುತಿಸಲಾಗಿದೆ.
ಸುಮಾರು ಒಂದೂವರೆ ತಿಂಗಳಿಂದ ಕಾಲೇಜಿಗೆ ಹೋಗದೆ ಮನೆಯಲ್ಲೇ ಇದ್ದ ಅತ್ತಾವುಲ್ಲಾ ಮಾನಸಿಕ ಖಿನ್ನತೆಗೆ ಒಳಗಾದಂತೆ ವರ್ತಿಸುತ್ತಿದ್ದು, ಫೆ.14 ರಂದು ರಾತ್ರಿ ಆತನ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಆದ್ರೆ ವಾಪಸ್ಸು ಮನೆಗೆ ಬಂದಾಗ ಅತ್ತಾವುಲ್ಲಾ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಂದುಬಂದಿದೆ.
ಈತ ಯಾವುದೋ ಕಾರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ಹೊರತು ಆತನ ಮರಣದಲ್ಲಿ ಯಾವುದೇ ಸಂಶಯ ಇರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. . ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಯುಡಿಆರ್ ನಂಬ್ರ 03/2024 ಕಲಂ:174 CRPC ರಂತೆ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821