ಮಂಗಳೂರು, ಫೆ 18(DaijiworldNews/SK): ಕಾಂಗ್ರೆಸ್ ನ ಗ್ಯಾರಂಟಿ' ಪದವನ್ನು ಬಿಜೆಪಿ ಪಕ್ಷದವರು ಕದ್ದು ಈಗ ಮೋದಿ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ. ನಮ್ಮ ಪಕ್ಷದ ನಾಯಕರು ಏನಾದರೂ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ಪ್ರಚಾರ ಮಾಡದೇ ಇದ್ದಾರೆ ಬಿಜೆಪಿಯವರು ನಮ್ಮ ಗ್ಯಾರಂಟಿ ಯೋಜನೆಗಳನ್ನು ತಾವೇ ಮಾಡಿದ್ದು ಎಂದು ಹೇಳಿಕೊಂಡು ತಿರುಗಾಡುತ್ತಾರೆ ಎಂದು ಸಿದ್ದರಾಮಯ್ಯ ಟೀಕೆವಾಡಿದ್ದಾರೆ.
ಈ ಬಗ್ಗೆ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಹಿಂದೆ ಬಿಜೆಪಿಯವರು ನಮ್ಮ ಗ್ಯಾರಂಟಿ ಯೋಜನೆ ರಾಜ್ಯದ ಜನತೆಗೆ ತಲುಪುತ್ತಿಲ್ಲ ಎಂದು ಹೇಳುತ್ತಿದ್ದರು. ಆದರೆ ಈಗ ಮಾತ್ರ ನಮ್ಮ ಗ್ಯಾರಂಟಿ ಪದವನ್ನು ಕದ್ದು ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ.
ಇಷ್ಟು ಮಾತ್ರವಲ್ಲದೇ ಸ್ವತಃ ನರೇಂದ್ರ ಮೋದಿ ಅವರೇ ಕಾಂಗ್ರೆಸ್ನ ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿಕೆ ನೀಡಿದ್ದರು. ಅವರು ಹೇಳಿದಂತೆ ಈಗ ರಾಜ್ಯ ದಿವಾಳಿ ಆಗಿರುತ್ತಿದ್ದರೆ 3.71 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಮಂಡಿಸಲು ಸಾಧ್ಯವಿತ್ತ ಎಂದು ಪ್ರಶ್ನಿಸಿದ್ದಾರೆ.