ಬ್ರಹ್ಮಾವರ, ಫೆ 23 (DaijiworldNews/HR): ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ಮನೆಗೆ ಬಂದ ಇಬ್ಬರು ಅಪರಿಚಿತರು ಮಹಿಳೆಯರು ಮನೆಯಲ್ಲಿದ್ದ 1 ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿರುವ ಘಟನೆ ನಡೆದಿದೆ.
ಫೆ. 21ರಂದು ಬೆಳಿಗ್ಗೆ ಉಪ್ಪಿನಕೋಟೆಯ ಮಹಿಮಾ ಎಂಬವರ ಮನೆಗೆ ಬಂದ ಇಬ್ಬರು ಅಪರಿಚಿತ ಹೆಂಗಸರು ತಾವು ಬಾಂಬೆಯಿಂದ ಬಂದಿರುವುದಾಗಿ ತಿಳಿಸಿದ್ದಾರೆ.
ಇನ್ನು ಮನೆಯವರ ವಿರೋಧದ ನಡುವೆಯೂ ಸೀದಾ ಮನೆಯೊಳಗೆ ಬಂದು ಮಹೀಮಾ ಅವರ 1 ವರ್ಷದ ಹೆಣ್ಣು ಮಗುವನ್ನು ಎತ್ತಿಕೊಂಡು ಮೊಬೈಲಿನಲ್ಲಿರುವ ವಿಡಿಯೋಗಳನ್ನು ತೋರಿಸುತ್ತಾ ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಕೂಡಲೇ ಮಹಿಮಾ ಅವರು ಅಪರಿಚಿತ ಹೆಂಗಸು ಎತ್ತಿಕೊಂಡು ಹೋದ ಮಗುವನ್ನು ಕರೆದುಕೊಂಡು ಬಂದಿರುತ್ತಾರೆ. ಅಷ್ಟರಲ್ಲಿ ಅಲ್ಲಿಗೆ ಮಹಿಮಾ ಅವರ ಅಣ್ಣ ಬಂದಿದ್ದನ್ನು ನೋಡಿದ ಆರೋಪಿಗಳು ಅಲ್ಲಿಂದ ಓಡಿ ಹೋಗಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.