ಮಂಗಳೂರು/ಉಡುಪಿ, ಮಾ 01 (DaijiworldNews/MS): ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ 2023-24ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯು ಪರೀಕ್ಷೆ ಶುಕ್ರವಾರ ಆರಂಭವಾಗಿದ್ದು, ಪರೀಕ್ಷೆಗಳು ಇಂದಿನಿಂದ ಮಾ.22 ರವರೆಗೆ ನಡೆಯಲಿದೆ.
ಮಂಗಳೂರು
ಉಡುಪಿ
ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಒಟ್ಟು 52,157 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ದಕ್ಷಿಣ ಕನ್ನಡದಲ್ಲಿ 36147 ವಿದ್ಯಾರ್ಥಿಗಳು ಹಾಗೂ ಉಡುಪಿಯಲ್ಲಿ 16010 ಪರೀಕ್ಷೆ ಬರೆಯಲಿದ್ದಾರೆ.
ದ.ಕ. ೫೩ ಹಾಗೂ ಉಡುಪಿ ಜಿಲ್ಲೆಯಲ್ಲಿ ೨೮ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಇದೇ ಮೊದಲ ಬಾರಿಗೆ 3 ಬಾರಿ ಪರೀಕ್ಷೆ (1,2,3) ಬರೆದು ಯಾವ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರುತ್ತದೋ ಅದನ್ನು ಉಳಿಸಿಕೊಳ್ಳುವ ಅವಕಾಶವನ್ನು ಸರ್ಕಾರ ಕಲ್ಪಿಸಿದೆ.