ಬ್ರಹ್ಮಾವರ,ಮಾ 03(DaijiworldNews/AK):ದುಷ್ಕರ್ಮಿಗಳು ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಾರ್ಕೂರಿನ ಹನೇಹಳ್ಳಿಯಲ್ಲಿ ನಡೆದಿದೆ.
ಕೃಷ್ಣ (38) ಮೃತ ವ್ಯಕ್ತಿ. ಆತನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.ಹನೇಹಳ್ಳಿಯಲ್ಲಿರುವ ತಮ್ಮ ಮನೆಯಲ್ಲಿ ಕೃಷ್ಣ ಒಬ್ಬರೇ ವಾಸವಿದ್ದರು. ಶನಿವಾರ ರಾತ್ರಿ 9.30ರ ಸುಮಾರಿಗೆ ಗುಂಡಿನ ಸದ್ದು ಕೇಳಿಸಿತ್ತು. ಸ್ಥಳೀಯರು ಪಟಾಕಿ ಇರಬಹುದು ಎಂದು ಭಾವಿಸಿ ನಿರ್ಲಕ್ಷಿಸಿದ್ದಾರೆ. ಮಾರ್ಚ್ 3ರ ಭಾನುವಾರ ಬೆಳಗ್ಗೆ ಮನೆ ಬಳಿ ಹೋಗಿ ಪರಿಶೀಲಿಸಿದಾಗ ಕೃಷ್ಣ ಶವವಾಗಿ ಪತ್ತೆಯಾಗಿದ್ದಾರೆ.
ಕೃಷ್ಣ ಮಣಿಪಾಲದಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಉಡುಪಿ ಎಸ್ಪಿ ಡಾ.ಅರುಣ್ ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.