ಮಂಗಳೂರು, ಮಾ 04(DaijiworldNews/SK): ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನೋರ್ವನ ಬಳಿಯಿಂದ ೪೨ ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆದ ಘಟನೆ ನಡೆದಿದೆ.
ಅಬುಧಾಬಿಯಿಂದ ಮಂಗಳೂರಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಕಾಸರಗೋಡಿನ ನಿವಾಸಿಯೋರ್ವನನ್ನು ತಪಾಸಣೆಗೊಳಪಡಿಸಿದಾಗ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ. ಪ್ರಯಾಣಿಕ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಅಂಡಾಕಾರದ 3 ಕವರ್ ಮೂಲಕ ಗುದನಾಳದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ ಎಂದು ಕಸ್ಟಮ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಯಾಣಿಕನ ಬಳಿಯಿಂದ 24 ಕ್ಯಾರೆಟ್ ನ 729 ಗ್ರಾಂ ತೂಕದ 45,92,700 ಲ. ರೂ ಮೌಲ್ಯದ ಚಿನ್ನ ಪತ್ತೆಯಾಗಿದೆ.