ಉಡುಪಿ, ಮಾ06(DaijiworldNews/SK): ಇಲ್ಲಿನ ಉಡುಪಿ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಶನ್ ಸಹಯೋಗದಲ್ಲಿ ಮಾರ್ಚ್ 9 ಹಾಗೂ 10ರಂದು ಉಡುಪಿಯ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 2ನೇ ದಕ್ಷಿಣ ಭಾರತ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ, ಸಹನಾ ಸಂಸ್ಥೆ ಕೋಟೇಶ್ವರ ಮಾಲಕ ಸುರೇಂದ್ರ ಶೆಟ್ಟಿ ಹೇಳಿದರು.
ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ದಕ್ಷಿಣ ಭಾರತದ ರಾಜ್ಯಗಳಾದ ಆಂದ್ರಪ್ರದೇಶ, ತೆಲಂಗಾಣ, ತಮಿಳುನಾಡು, ಪಾಂಡಿಚೇರಿ, ಕೇರಳ ಮತ್ತು ಕರ್ನಾಟಕ ಸೇರಿದಂತೆ 30 ರಿಂದ 80 ವರ್ಷದ ವಯೋಮಾನದ 773 ಕ್ರೀಡಾಪಟುಗಳು ಹೆಸರು ನೋಂದಾಯಿಸಿದ್ದಾರೆ. ಭಾಗವಹಿಸುವ ಕ್ರೀಡಾಪಟಗುಳಿಗೆ ಉಪಹಾರ, ಊಟ ಮತ್ತು ವಸತಿಗೆ ಈಗಾಗಲೇ ವ್ಯವಸ್ಥೆ ಮಾಡಿಕೊಡಲಾಗಿದೆ. ಅಲ್ಲದೆ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಟೀ ಶರ್ಟ್ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ಆಯೋಗದ ಅಧ್ಯಕ್ಷರು, ಮಾಜಿ ಸಚಿವರು ಕರ್ನಾಟಕ ಸರ್ಕಾರ ಮತ್ತು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಭಾಗವಹಿಸಲಿದ್ದಾರೆ. ವಿದಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಲಿ , ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಾಜೀ ಸಚಿವ ವಿನಯ ಕುಮಾರ್ ಸೊರಕೆ, ಮಾಜೀ ಶಾಸಕ ಕೆ. ಗೋಪಾಲ್ ಪೂಜಾರಿ, ಉದ್ಯಮಿ ಪ್ರಸಾದ್ ರಾಜ್ ಕಾಂಚನ್, ಉದ್ಯಮಿಗಳಾದ ಉದಯ ಶೆಟ್ಟಿ ಮುನಿಯಾಲು, ದಿನೇಶ್ ಹೆಗ್ಡೆ, ಕಾರ್ಕಳ ಲಯನ್ಸ್ ಕ್ಲಬ್ ಅಧ್ಯಕ್ಷ ಎಂ.ಜಿ.ಎಫ್ ಲಯನ್ ಸಚ್ಚೇಂದ್ರ ಶೆಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.