ಮಂಗಳೂರು,ಏ29(DaijiworldNews/AZM):ಮಂಗಳೂರಿನಲ್ಲಿ ನೀರಿನ ಸಮಸ್ಯೆ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿನಿತ್ಯ ನನಗೆ ಕರೆ ಮಾಡಿ ಸಮಸ್ಯೆ ಪರಿಹರಿಸುವಂತೆ ಕೇಳಿಕೊಳ್ಳುತ್ತಿದ್ದಾರೆ ಆದರೆ ಸಮಸ್ಯೆ ಪರಿಹಾರಕ್ಕೆ ದೊಡ್ಡವರು ಪ್ರಯತ್ನಿಸುತ್ತಿಲ್ಲ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಏನು ಮಾಡುತ್ತಿದ್ದಾರೆ ? ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಎಷ್ಟು ಟ್ಯಾಂಕರ್ಗಳಿವೆ ? ಎಂದು ಪ್ರಶ್ನಿಸಿದರು. ನೀರಿನ ಪೂರೈಕೆಯಲ್ಲಿ ಮತ್ತೆ ಮತ್ತೆ ಸಮಸ್ಯೆಯಾಗಿದ್ದು, ಈ ವಿಚಾರದಲ್ಲಿ ರಾಜಕಾರಣ ಮಾಡುವುದು ಬೇಡ ಜನರ ಸಮಸ್ಯೆ ಇತ್ಯರ್ಥವಾಗಬೇಕು. ಬಿಜೆಪಿ ಶಾಸಕರನ್ನು ಜಿಲ್ಲಾ ಉಸ್ತುವಾರಿ ಸಚಿವರು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಕಿಡಿಕಾರಿದರು.