ಉಡುಪಿ, ಮಾ 11 (DajiworldNews/AK): ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷಜಯ ಪ್ರಕಾಶ್ ಹೆಗ್ಡೆ ಅವರು ಇಂದು ಮಂಗಳವಾರ ಮಾ. 12 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಸಂಜೆ 4ಗಂಟೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.ಅವರು ಸೇರ್ಪಡೆಗೊಳ್ಳುವ ನಿರ್ಧಾರವನ್ನು ಅಧಿಕೃತ ಹೇಳಿಕೆಯಲ್ಲಿ ಖಚಿತಪಡಿಸಿದ್ದಾರೆ.
ಜೆ.ಪಿ ಹೆಗ್ಡೆ ಅವರು ಈ ಹಿಂದೆ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಉಡುಪಿ ಜಿಲ್ಲೆಯ ಮೊದಲ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ ಇವರು ಅನಂತರ ಕಾಂಗ್ರೆಸ್ ಪಕ್ಷ ಸೇರಿ 2012ರಲ್ಲಿ ನಡೆದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆದ್ದು ಸಂಸದರಾಗಿದ್ದರು.2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು.
ಬಳಿಕ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಸೇರಿಕೊಂಡಿದ್ದರು. ಬಿಜೆಪಿ ಸರಕಾರ ಇದ್ದಾಗ ಇವರನ್ನು ಹಿಂದುಳಿದ ವರ್ಗಗಳ ಆಯೋ ಗದ ಅಧ್ಯಕ್ಷರಾಗಿ ನೇಮಿಸಿತ್ತು. ಅವರು ಸಾಮಾಜಿಕ, ಶೈಕ್ಷಣಿಕಸ್ಥಿತಿಗತಿ ಅಧ್ಯಯನ ವರದಿಯನ್ನು ಇತ್ತೀಚಿಗಷ್ಟೇ ಸರಕಾರಕ್ಕೆ ಸಲ್ಲಿಸಿದರು.ಆಯೋಗದ ಅಧ್ಯಕ್ಷ ಅವಧಿ ಮುಗಿದ ಆನಂತರ ಕಾಂಗ್ರೆಸ್ ಸೇರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದರು. ಇದೀಗ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.