ಉಡುಪಿ, ಮಾ 13(Daijiworld/PP): "ಜಯಪ್ರಕಾಶ್ ಹೆಗ್ಡೆ ಈ ಹಿಂದೆಯೂ ಕಾಂಗ್ರೆಸ್ ನಲ್ಲಿ ಇದ್ದವರು ಈಗ ಮತ್ತೆ ಅವರಿಂದ ಪಕ್ಷಕ್ಕೆ ಶಕ್ತಿ ಬಂದಿದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿಉಡುಪಿಯಲ್ಲಿ ಹೇಳಿಕೆ ನೀಡಿದ್ದಾರೆ.
ಜಿಲ್ಲಾಡಳಿತ, ಜಿ.ಪಂ ವತಿಯಿಂದ ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆಯಲಿರುವ ಗ್ಯಾರಂಟಿ ಸಮಾವೇಶದಲ್ಲಿ ಪಾಲ್ಗೊಳಲು ಆಗಮಿಸಿದ್ದ ಮುಖ್ಯಮಂತ್ರಿ, ಮಾಧ್ಯಮದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿ, "ಉಡುಪಿ ಚಿಕ್ಕಮಗಳೂರಿಗೆ ಕಾಂಗ್ರೆಸ್ ಅಭ್ಯರ್ಥಿಯ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡುತ್ತದೆ.ಆದರೆ ಜಯಪ್ರಕಾಶ್ ಹೆಗ್ಡೆಹೆಗ್ಡೆ ಸೇರ್ಪಡೆಯಿಂದ ನಮಗೆ ಇನ್ನಷ್ಟು ಶಕ್ತಿ ಸಿಕ್ಕಿದೆ" ಎಂದಿದ್ದಾರೆ.
ಇದೇ ವೇಳೆ ಕೇಂದ್ರ ಸರಕಾರದ ಸಿ.ಎ.ಎ ಜಾರಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, "ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಟಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ" ಎಂದು ಆರೋಪಿಸಿದ್ದಾರೆ
ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ತಪ್ಪಿರುವುದರ ಕುರಿತ ಪ್ರಶ್ನೆಗೆ, " ಕರಡಿ ಸಂಗಣ್ಣನನ್ನು ನಾನು ಭೇಟಿಯಾಗಿಲ್ಲ,ಪ್ರತಾಪ್ ಸಿಂಹ ಸೀಟು ತಪ್ಪಿಸಿದ್ದು ಯಾಕೆ ಎಂದು ಬಿಜೆಪಿ ಅವರಲ್ಲಿ ಕೇಳಿಸಿಂಹ ಸೀಟು ತಪ್ಪಲು ಕಾರಣ ಏನು ನನಗೆ ಗೊತ್ತಿಲ್ಲ ನೀವು ಪ್ರತಾಪ ಸಿಂಹನನ್ನೇ ಕೇಳಿ ತಿಳ್ಕೊಳ್ಳಿ" ಎಂದು ಹೇಳಿದ್ದಾರೆ.