ಉಡುಪಿ, ಮಾ 13(DaijiworldNews/AA): ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿಯ ಪ್ರಬಲ ಆಕಾಂಕ್ಷಿಗಳಲ್ಲೊಬ್ಬರಾದ ಪ್ರಮೋದ್ ಮಧ್ವರಾಜ್ ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪಿದ್ದು, ತನ್ನ ಎಲ್ಲಾ ಬೆಂಬಲಿಗರಿಗೆ ಮತ್ತು ಹಿತೈಷಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಟಿಕೆಟ್ ಫೈನಲ್ ಆದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಚುನಾವಣೆ ಸಂದರ್ಭದಲ್ಲಿ ಪಕ್ಷದ ನಿರ್ದೇಶನದಂತೆ ಪಕ್ಷಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.