ಪುತ್ತೂರು, ಮಾ 24(DaijiworldNews/AA): ಅಂತರ್ ರಾಜ್ಯ ಕಳ್ಳತನ ಪ್ರಕರಣವನ್ನು ಪುತ್ತೂರು ನಗರ ಠಾಣಾ ಪೊಲೀಸರು ಭೇದಿಸಿದ್ದು, ತಮಿಳುನಾಡು ಮೂಲದ ಅಂತಾರಾಜ್ಯ ಕಳ್ಳಿಯನ್ನು ಬಂಧಿಸಿದ್ದಾರೆ.
ತಮಿಳುನಾಡಿನ ಕೊಯಮತ್ತೂರು ಸಿಕ್ಕಿಲಂಪಳಯಂ ನಿವಾಸಿ ಈಸ್ವರಿ(45) ಬಂಧಿತೆ.
ಬಂಧಿತೆಯಿಂದ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈಕೆ ಪುತ್ತೂರು ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಕಳೆದ ಒಂದೂವರೆ ತಿಂಗಳ ಹಿಂದೆ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ್ದಳು. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣವನ್ನು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.