ಸುಳ್ಯ, ಮಾ 24(DaijiworldNews/AA): ಚಾಲಕನಿಗೆ ನಿದ್ರೆ ಆವರಿಸಿದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮೋರಿಗೆ ಢಿಕ್ಕಿ ಹೊಡೆದು ಜಖಂಗೊಂಡ ಘಟನೆ ಸುಳ್ಯ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಸಂಭವಿಸಿದೆ.
ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಗೂನಡ್ಕದ ಶಿರಾಡಿ ದೈವಸ್ಥಾನದ ದ್ವಾರದ ಬಳಿ ಮೋರಿಗೆ ಢಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿರುವುದಾಗಿ ತಿಳಿದುಬಂದಿದೆ.