ಮಂಗಳೂರು/ಉಡುಪಿ, ಮಾ 25(DaijiworldNews/MS): ಇಂದಿನಿಂದ ರಾಜ್ಯಾದ್ಯಾಂತ ಎಸೆಸ್ಸೆಲ್ಸಿ ಪರೀಕ್ಷೆ ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಾಂತ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.
Mangaluru
Udupi
ದ.ಕ. ಜಿಲ್ಲೆಯಲ್ಲಿ 27,663 ಶಾಲಾ ವಿದ್ಯಾರ್ಥಿಗಳು 1053 ಖಾಸಗಿ ವಿದ್ಯಾರ್ಥಿಗಳು 1,632 ಪುನರಾವರ್ತಿತ ಅಭ್ಯರ್ಥಿಗಳು 30,348 ಪರೀಕ್ಷೆ ಎದುರಿಸಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 88 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 39 ಪರೀಕ್ಷಾ ಕೇಂದ್ರಗಳಿವೆ.
ಇನ್ನು ಉಡುಪಿ ಜಿಲ್ಲೆಯಲ್ಲಿ ಒಟ್ಟು 14,331 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಪರೀಕ್ಷೆ ನಡೆಸಲು 51 ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಭದ್ರತಾ ಕ್ಯಾಮೆರಾಗಳು ಮತ್ತು ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಮತ್ತು ಶೌಚಾಲಯದಂತಹ ಮೂಲಭೂತ ಸೌಕರ್ಯಗಳನ್ನು ಸಹ ಒದಗಿಸಲಾಗಿದೆ.