ಮಂಗಳುರು, ಮಾ 28(DaijiworldNews/ AK): ದಕ್ಷಿಣ ಕನ್ನಡ ಲೋಕಸಭಾ ಟಿಕೆಟ್ ಕೈತಪ್ಪಿದ್ದರಿಂದ ಬೇಸರದಲ್ಲಿರುವ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ ಎಂದುರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶಿಸಿದ್ದಾರೆ.
ಇದರ ಜೊತೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲ್ ಮೂರು ಬಾರಿ ಸಂಸದರಾಗಿದ್ದರು. ಆದ್ರೆ, ಈ ಬಾರಿ ಹೈಕಮಾಂಡ್ ಹೊಸ ಮುಖಕ್ಕೆ ಮಣೆ ಹಾಕಿದೆ. ಟಿಕೆಟ್ ಕೈತಪ್ಪಿದ್ದರು ಸಹ ನಳಿನ್ ಕಟೀಲ್ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಭಾವುಕರಾಗಿ ಹೇಳಿಕೆ ನೀಡಿದ್ದರು.
ಅಲ್ಲದೇ ನನಗೆ ಮೂರು ಬಾರಿ ಅವಕಾಶ ನೀಡಿದ್ದಾರೆ. ಪಕ್ಷ ನಿಂತ ನೀರಾಗಬಾರದು, ಹೊಸಬರು ಬರುತ್ತಾರೆ . ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ, ಪಕ್ಷ ಕಸ ಗುಡಿಸಿ ಎಂದರೂ ಗುಡಿಸುತ್ತೇನೆ ಎಂದು ಹೇಳಿದ್ದರು.