ಮಂಗಳೂರು, ಮಾ 29(DaijiworldNews/ AK): ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 29 ರವರೆಗೆ ಜಿಲ್ಲೆಯಲ್ಲಿ 41,80,391 ರೂಪಾಯಿ ಮೌಲ್ಯದ 12,824 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ . 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 212 ಎಫ್ ಐ ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.