ಮಂಗಳೂರು,ಮಾ 29(DaijiworldNews/AK):ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ 17- ದಕ್ಷಿಣ ಕನ್ನಡ ಜಿಲ್ಲೆಯ ವೆಚ್ಚ ವೀಕ್ಷಕರಾಗಿ ಆಗಮಿಸಿರುವ ಮೆರಗು ಸುರೇಶ್ ಅವರು ಮಾರ್ಚ್ 29ರ ಶುಕ್ರವಾರ ಬೆಳಿಗ್ಗೆ ನಗರದ ಜಿಲ್ಲಾ ಚುನಾವಣಾಧಿಕಾರಿಯವರ ಕಚೇರಿಯಲ್ಲಿ ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾ ವಹಿಸಲು ನೇಮಿಸಲಾಗಿರುವ ವಿವಿಧ ತಂಡಗಳ ನೋಡಲ್ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿ ಡಾ. ಆನಂದ್ ಕೆ., ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಜಿಲ್ಲಾ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್, ಖರ್ಚು ವೆಚ್ಚಗಳಿಗೆ ಸಂಬಂಧಿಸಿದಂತೆ ನಿಯೋಜಿಸಲಾಗಿದೆ ನೋಡಲ್ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಚುನಾವಣಾ ವೆಚ್ಚ ವೀಕ್ಷಕರು ಚುನಾವಣಾ ಸಂಬಂಧ ರಚಿಸಲಾಗಿರುವ ವಿವಿಧ ಸಮಿತಿಗಳ ಕಚೇರಿಗಳನ್ನು ಪರಿಶೀಲಿಸಿದರು. ಈ ವೇಳೆ ಎಂ ಸಿ ಎಂ ಸಿ ಸಮಿತಿಯ ಕಚೇರಿಗೂ ಭೇಟಿ ನೀಡಿದ ಅವರು ಸಮಿತಿಯಲ್ಲಿ ಕೈಗೊಳ್ಳಲಾಗುತ್ತಿರುವ ಕಾರ್ಯಗಳ ಬಗ್ಗೆ ಮಾಹಿತಿ ಪಡೆದು ಕೆಲವು ಸೂಚನೆಗಳನ್ನು ನೀಡಿದರು.