ಮಂಗಳೂರು,,ಮಾ 29(DaijiworldNews/ AK): ನೇತ್ರಾವತಿ ನದಿಗೆ ಮಗುವಿನೊಂದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಅಡ್ಯಾರ್ ಪದವು ನಿವಾಸಿ ಚೈತ್ರ ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತದೇಹ ಹರೇಕಳ ಸೇತುವೆ ಬಳಿ ಪತ್ತೆಯಾಗಿದೆ. ಮಧ್ಯಾಹ್ನ ವೇಳೆ ನಾಪತ್ತೆಯಾಗಿದ್ದ ತಾಯಿ ಮಗು ಸಾಮಾಜಿಕ ಜಾಲತಾಣದ ಮೂಲಕ ಹುಡುಕಾಟಕ್ಕೆ ಸಂಬಂಧಿಕರು ಮನವಿ ಮಾಡಿದ್ದರು. ನಿನ್ನೆಯಷ್ಟೇ 1 ವರ್ಷದ ಮಗುವಿನ ಹುಟ್ಟುಹಬ್ಬ ದೇರಳಕಟ್ಟೆಯ ಸೇವಾಶ್ರಮದಲ್ಲಿ ಆಚರಿಸಿದ್ದರು.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821