ಬಂಟ್ವಾಳ, ಏ 01(DaijiworldNews/AA): ವಿಪರೀತ ಕುಡಿತದ ಚಟ, ಮಾನಸಿಕವಾಗಿ ಅಸ್ವಸ್ಥತೆಯನ್ನು ಹೊಂದಿದ್ದ ವ್ಯಕ್ತಿಯೋರ್ವ ವಿಷ ಪದಾರ್ಥ ಸೇವಿಸಿ ಮೃತಪಟ್ಟ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರವೀಣ್ ನಜರತ್ (45) ಮೃತಪಟ್ಟ ವ್ಯಕ್ತಿ.
ಕೂಲಿ ಕೆಲಸ ಮಾಡುತ್ತಿದ್ದ ಈತ ವಿಪರೀತ ಕುಡಿತದ ಚಟ ಹೊಂದಿದ್ದ. ಕಳೆದ 15 ದಿನಗಳ ಹಿಂದೆ ಮಾನಸಿಕವಾಗಿ ನೊಂದಿದ್ದ ಈತ ಮನೆಯ ಮಹಡಿಯಿಂದ ಕೆಳಗೆ ಹಾರಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದ.
ಮಾ.29 ರಂದು ಕೆಲಸಕ್ಕೆ ಹೋಗದೆ ಮನೆಯಲ್ಲಿದ್ದ ಆತ, ಅಂದು ಮಧ್ಯಾಹ್ನ ವಿಪರೀತ ಕುಡಿದು ಮನೆಗೆ ಬಂದಿದ್ದಾನೆ. ಬಳಿಕ ಮನೆಯಲ್ಲಿ ಮದ್ಯಪಾನ ಚಟದ ಬಗ್ಗೆ ಪ್ರಶ್ನಿಸಿದ್ದಾರೆ. ಈ ವೇಳೆ ಮನೆಯವರ ಮುಂದೆಯೇ ಯಾವುದೋ ವಿಷ ಪದಾರ್ಥ ಸೇವಿಸಿದ್ದಾನೆ. ನಂತರ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾನೆ.