ಮಂಗಳೂರು, ಏ 02(DaijiworldNews/AA): ಮುಂಬರುವ ಲೋಕಸಭಾ ಚುನಾವಾಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದೆ. ನೀತಿ ಸಂಹಿತೆ ಜಾರಿಯಾದ ದಿನದಿಂದ ಏಪ್ರಿಲ್ 1ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 41,90,665 ರೂ. ಮೌಲ್ಯದ 12,844 ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.
ಮದ್ಯದ ಜೊತೆಗೆ 8,69,950 ರೂ. ಮೌಲ್ಯದ 15.5 ಕೆ.ಜಿ. ಡ್ರಗ್ಸ್ ಅನ್ನು ಕೂಡ ಜಪ್ತಿ ಮಾಡಲಾಗಿದೆ. ಇನ್ನು ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 243 ಎಫ್ ಐ ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.