ಮಂಗಳೂರು,ಏ 05 (DaijiworldNews/AK): 2024ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏಪ್ರಿಲ್ 5ರವರೆಗೆ ಜಿಲ್ಲೆಯಲ್ಲಿ 1,95,65,212 ರೂಪಾಯಿ ಮೌಲ್ಯದ 90,496 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 8,69,950ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 347 ಎಫ್ ಐ ಆರ್ ಪ್ರಕರಣ ದಾಖಲಾಗಿದೆ. ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.