ಮಂಗಳೂರು, ಏ 06 (DaijiworldNews/AA): ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ಸೊತ್ತು ಸುಟ್ಟು ಭಸ್ಮವಾಗಿರುವ ಘಟನೆ ಮಂಗಳೂರು ನಗರದ ಬಂದರ್ ಜಿ ಎಂ ರಸ್ತೆಯಲ್ಲಿ ಶನಿವಾರ ನಡೆದಿದೆ.
ಶಂಸುದ್ದೀನ್ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಸುಮಾರು 10 ಲಕ್ಷ ಮೌಲ್ಯದ ಸೊತ್ತು ಹಾನಿಯಾಗಿರುವುದಾಗಿ ಅಂದಾಜಿಸಲಾಗಿದೆ.
ಈ ಕಟ್ಟಡದಲ್ಲಿ ಐದು ಕುಟುಂಬಗಳು ವಾಸವಾಗಿದ್ದು, ಅವರೆಲ್ಲೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿರಬಹುದು ಎನ್ನಲಾಗಿದೆ. ಇನ್ನು ಸ್ಥಳಕ್ಕೆ ಮಂಗಳೂರು ಪಾಂಡೇಶ್ವರ ಅಗ್ನಿಶಾಮಕ ದಳ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.