ಮಂಗಳೂರು, ಏ 07 (DaijiworldNews/AA): ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯಲ್ಲಿ 23 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ.
ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ 23 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿರುವ ಜಿಲ್ಲಾಡಳಿತ ಜಿಲ್ಲೆಯಲ್ಲಿನ ಹಣ ಸಾಗಾಟದ ಮೇಲೆ ತೀವ್ರ ನಿಗಾ ವಹಿಸಿದೆ. ಇನ್ನು ಕೇರಳದ ಕಾಸರಗೋಡಿನಲ್ಲೂ ಏ. 26 ರಂದೇ ಚುನಾವಣೆ ನಡೆಯುತ್ತಿದೆ. ಹೀಗಾಗಿ ಗಡಿಯಲ್ಲಿ ಎರಡೂ ರಾಜ್ಯಗಳ ಪೊಲೀಸರು ಮತ್ತು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.
ಇನ್ನು ಜಿಲ್ಲೆಯಲ್ಲಿನ 23 ಚೆಕ್ ಪೋಸ್ಟ್ ಗಳಲ್ಲಿ ಅಂತರ್ ರಾಜ್ಯ 9, ಅಂತರ್ ರಾಜ್ಯ 7 ಹಾಗೂ ಸ್ಥಳೀಯ 7 ಚೆಕ್ ಪೋಸ್ಟ್ ಗಳಿವೆ.