ಮಂಗಳೂರು, ಏ. 14(DaijiworldNews/AK): ಪುಲಿಕುಕ್ಕು ಎಂಬಲ್ಲಿನ ಕುಮಾರಧಾರ ನದಿಯಲ್ಲಿ ಮೂರ್ನಾಲ್ಕು ವರ್ಷದ ಮೊಸಳೆಯ ಮೃತದೇಹ ಪತ್ತೆಯಾಗಿದ್ದು, ಪ್ಲಾಸ್ಟಿಕ್ ಸೇವನೆಯಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಮರಣೋತ್ತರ ಪರೀಕ್ಷೆಯ ಸಮಯದಲ್ಲಿ, ಮೊಸಳೆಯ ಹೊಟ್ಟೆಯಲ್ಲಿ ಸುಮಾರು ಒಂದು ಕಿಲೋಗ್ರಾಂ ಪ್ಲಾಸ್ಟಿಕ್ ಪತ್ತೆಯಾಗಿದ್ದು, ಪ್ಲಾಸ್ಟಿಕ್ ತ್ಯಾಜ್ಯವನ್ನು ಸೇವಿಸಿ ಮೊಸಳೆ ಸಾವನ್ನಪ್ಪಿದ ಮೊದಲ ದಾಖಲಾದ ಪ್ರಕರಣವನ್ನು ಗುರುತಿಸಲಾಗಿದೆ.
ಕಡಬ-ಪಂಜ ಸಂಪರ್ಕ ರಸ್ತೆಯ ಪುಲಿಕುಕ್ಕು ಸೇತುವೆಯ ಕೆಳಗೆ ಮೊಸಳೆಯ ಮೃತದೇಹ ಶನಿವಾರ ಪತ್ತೆಯಾಗಿದೆ.ಅರಣ್ಯ ಇಲಾಖೆಯ ಯೇನೆಕಲ್ಲು ನರ್ಸರಿಯಲ್ಲಿ ಪಶು ವೈದ್ಯಾಧಿಕಾರಿ ಡಾ.ಅಜಿತ್ ಮರಣೋತ್ತರ ಪರೀಕ್ಷೆ ನಡೆಸಿದರು. ಪ್ಲಾಸ್ಟಿಕ್ ತ್ಯಾಜ್ಯದ ಜೊತೆಗೆ ಕೋಳಿ ತ್ಯಾಜ್ಯ ಮತ್ತು ಬಳಸಿದ ಮಕ್ಕಳ ನ್ಯಾಪ್ಕಿನ್ ಪ್ಯಾಡ್ಗಳನ್ನು ಪ್ಲಾಸ್ಟಿಕ್ನಲ್ಲಿ ಕಟ್ಟಿರುವುದು ಕಂಡುಬಂದಿದೆ. ಪ್ಲಾಸ್ಟಿಕ್ ತ್ಯಾಜ್ಯವನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗದೆ ಮೊಸಳೆ ಸಾವನ್ನಪ್ಪಿದೆ . ಹೆಣ್ಣು ಮೊಸಳೆಗೆ ಮೂರರಿಂದ ನಾಲ್ಕು ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ.
ಮರಣೋತ್ತರ ಪರೀಕ್ಷೆ ವೇಳೆ ಮೊಸಳೆಯ ಹೊಟ್ಟೆಯಲ್ಲಿ ಸುಮಾರು ಒಂದು ಕೆಜಿ ಪ್ಲಾಸ್ಟಿಕ್ ಪತ್ತೆಯಾಗಿದೆ. ಪ್ಲಾಸ್ಟಿಕ್ ತ್ಯಾಜ್ಯ ಸೇವನೆಯಿಂದ ಮೊಸಳೆ ಸಾವನ್ನಪ್ಪಿದ ಮೊದಲ ಪ್ರಕರಣ ಇದಾಗಿದೆ.
ಮರಣೋತ್ತರ ಪರೀಕ್ಷೆಯ ನಂತರ ಮೊಸಳೆಯ ಅಂತಿಮ ವಿಧಿವಿಧಾನಗಳನ್ನು ನಡೆಸಲಾಯಿತು. ಎಸಿಎಫ್ ಪ್ರವೀಣ್ ಕುಮಾರ್ ಶೆಟ್ಟಿ, ಅರಣ್ಯಾಧಿಕಾರಿಗಳಾದ ಗಿರೀಶ್ ಮತ್ತು ಸುಬ್ರಹ್ಮಣ್ಯ, ಡಾ.ಅಜಿತ್, ಮತ್ತಿತರರು ಉಪಸ್ಥಿತರಿದ್ದರು.