ಸುಳ್ಯ, ಮೇ 02 (Daijiworld News/MSP): ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕರಾವಳಿ ಪತ್ರಕರ್ತನ ನಾಮಪತ್ರ ತಿರಸ್ಕೃತಗೊಂಡಿವೆ.
ಕರಾವಳಿ ಖ್ಯಾತ ವಾರಪತ್ರಿಕೆಯ ಸಂಪಾದಕ ಯು.ಪಿ ಶಿವಾನಂದ ಅವರು ಪ್ರಧಾನಿ ಮೋದಿ ವಿರುದ್ದ ವಾರಾಣಸಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ ಅವರು ಸಲ್ಲಿಸಿದ್ದ ನಾಮಪತ್ರದಲ್ಲಿ ಲೋಪದೋಷಗಳಿದ್ದ ಕಾರಣ ನಾಮಪತ್ರವನ್ನು ತಿರಸ್ಕರಿಸಿಲಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಸಂಪಾದಕ ಯು.ಪಿ ಶಿವಾನಂದ ಅವರು ‘ದಿಲ್ಲಿಯಿಂದ ಹಳ್ಳಿಗಲ್ಲ, ಹಳ್ಳಿಯಿಂದ ದಿಲ್ಲಿಗೆ’ ಎಂಬುದನ್ನು ಪ್ರತಿಪಾದಿಸುವ ಸಲುವಾಗಿ ಮೋದಿ, ರಾಹುಲ್ ವಿರುದ್ದ ಚುನಾವಣೆಯಲ್ಲಿ ಕಣಕ್ಕಿಳಿಯಳಿಯುತ್ತಿದ್ದೇನೆ. ಮಹಾತ್ಮಾ ಗಾಂಧೀಜಿಯ ಗ್ರಾಮ ಸ್ವರಾಜ್ಯ ಮತ್ತು ರಾಮರಾಜ್ಯದ ಕನಸನ್ನು ನನಸು ಮಾಡುಲೆಂದು ಜನಜಾಗೃತಿಯಲ್ಲಿ ನಾನು ತೊಡಗಿಸಿಕೊಂಡಿದ್ದು, ಬಲಾತ್ಕಾರದ ಬಂದ್ ಮತ್ತು ನೇತ್ರಾವತಿ ನದಿ ತಿರುವು ಯೋಜನೆ ವಿರುದ್ಧ ಗ್ರಾಮೀಣ ಮಟ್ಟದಲ್ಲಿ ಹೋರಾಟ ಮಾಡುತ್ತಾ ಬಂದಿದ್ದೇನೆ.
ಈ ನಿಟ್ಟಿನಲ್ಲಿ ರಾಷ್ಟ್ರಮಟ್ಟದ ನಾಯಕರ ಗಮನ ಸೆಳೆಯಲು ಪ್ರಧಾನಿ ಮೋದಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಕಣಕ್ಕಿಳಿಯುವ ನಿರ್ಧಾರ ಮಾಡಿದ್ದೇನೆ’ ಎಂದು ಹೇಳಿದ್ದರು.ಆದ್ರೆ ಇದೀಗ ವಾರಾಣಸಿ ಕ್ಷೇತ್ರದಲ್ಲಿ ಅವರು ಸಲ್ಲಿಸಿದ್ದ ನಾಮಪತ್ರ ತಿರಸ್ಕೃತವಾಗಿದೆ.