ಬಂಟ್ವಾಳ, ಏ. 16(DaijiworldNews/AA): ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ.
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಹೆಚ್ಚಿನ ಅಂಗವೈಕಲ್ಯತೆ ಹೊಂದಿದ ಮತದಾರರ ಮನೆಗಳಿಗೆ ಮತಗಟ್ಟೆ ಅಧಿಕಾರಿಗಳ ತಂಡವು ತೆರಳಿ ಮತದಾನ ಮಾಡಿಸುವ ಪ್ರಕ್ರಿಯೆ ಸೋಮವಾರದಿಂದ ಪ್ರಾರಂಭವಾಗಿದೆ.
ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿಯವರ ಬಿ ಮೂಡಾ ಗ್ರಾಮದ ಬಸ್ತಿಪಡ್ಪುವಿನಲ್ಲಿರುವ ನಿವಾಸಕ್ಕೆ ತೆರಳಿ ಮಂಗಳವಾರ ಮತದಾನ ಪ್ರಕ್ರಿಯೆ ನಡೆಸಲಾಯಿತು. ಮತದಾರರ ಪಟ್ಟಿಯಂತೆ ಇವರಿಗೆ 87 ವರ್ಷ ವಯಸ್ಸಾಗಿದ್ದು, ಈ ಹಿಂದೆ ಭಂಡಾರಿಬೆಟ್ಟು ಶಾಲೆಯ ಭಾಗಸಂಖೈ 130 ಮತಗಟ್ಟೆಗೆ ತೆರಳಿ ಮತದಾನ ಮಾಡುತ್ತಿದ್ದರು.