ಕಾಸರಗೋಡು,ಏ.17(DaijiworldNews/AK): ಮುಂದಿನ ಐದು ವರ್ಷಗಳಲ್ಲಿ ಭಾರತ ವಿಶ್ವದಲ್ಲೇ ಅರ್ಥಿಕ ಸಬಲೀಕರಣದಲ್ಲಿ ಪ್ರಥಮ ಸ್ಥಾನಕ್ಕೆ ತಲುಪಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಹೇಳಿದರು.
ಅವರು ಬುಧವಾರ ಬೆಳಿಗ್ಗೆ ಕಾಸರಗೋಡು ತಾಲಿಪಡ್ಪು ಮೈದಾನದಲ್ಲಿ ಎನ್ ಡಿ ಎ ಚುನಾವಣಾ ಪ್ರಚಾರ ಸಮಾವೇಶವನ್ನುದ್ದೇಶಿಸಿ ಮಾತನಾಡಿ, ಎನ್ ಡಿಎ ನೇತೃತ್ವದ ಕೇಂದ್ರ ಸರಕಾರ ರಾಷ್ಟ್ರದ ಭದ್ರತೆಗೆ ವಿಶೇಷ ಆದ್ಯತೆ ನೀಡಿದೆ. ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗಿದೆ. ದೇಶದ ಭದ್ರತೆ , ಅಖಂಡತೆ ಹಾಗೂ ಸಮಗ್ರತೆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಅಭಿಪ್ರಾಯಪಟ್ಟರು .
ಕೇರಳದಲ್ಲಿ ಪರಸ್ಪರ ಆರೋಪ - ಪ್ರತ್ಯಾರೋಪ ಮಾಡುವ ಎಡ - ಬಲ ಪಕ್ಷಗಳು ದೆಹಲಿಯಲ್ಲಿ ಒಂದಾಗುತ್ತಿವೆ. ಕಮ್ಯೂನಿಸ್ಟ್ ಪಕ್ಷಗಳು ಅಸ್ವಿತ್ವ ಕಳೆದುಕೊಂಡಿದೆ ಎಂದು ಹೇಳಿದರು.
ಕಾಸರಗೋಡು ಬಿಜೆಪಿ ಅಭ್ಯರ್ಥಿ ಎಂ . ಎಲ್ ಅಶ್ವಿನಿ ,ಬಿಜೆಪಿ ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರ್ , ಮಂಗಳೂರು ಸಂಸದ ನಳೀನ್ ಕುಮಾರ್ ಕಟೀಲ್ , ಕೆ . ರಂಜಿತ್ , ಎಂ . ನಾರಾಯಣ ಭಟ್ , ಬಿಡಿಜೆಸ್ ಜಿಲ್ಲಾಧ್ಯಕ್ಷ ಗಣೇಶ್ ಪಾರೆಕಟ್ಟೆ ಮೊದಲಾದವರು ಉಪಸ್ಥಿತರಿದ್ದರು