ಕಡಬ,ಏ 20 (DaijiworldNews/MS): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಕ್ರವಾರ ಸಂಜೆ ಕಡಬದಲ್ಲಿ ಕಾರ್ನರ್ ಮೀಟಿಂಗ್ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಮತದಾನ ನಮ್ಮ ಹಕ್ಕು. ಇದರ ಮಹತ್ವವನ್ನು ಅರಿತುಕೊಂಡು ಮತ ಚಲಾಯಿಸಲು ಜನರಿಗೆ ಅರಿವು ಮೂಡಿಸಬೇಕು. ಇಂದಿನ ಪರಿಸ್ಥಿತಿಯಲ್ಲಿ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಅನಿವಾರ್ಯತೆಯನ್ನು ಜನರಿಗೆ ಮನಗಾಣಿಸಿ. ಅಭಿವೃದ್ಧಿಯ ದೃಷ್ಟಿಯಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಯೋಜನೆಗಳನ್ನು ತಿಳಿಸಿ. ಗ್ಯಾರೆಂಟಿ ಯೋಜನೆಯ ಪ್ರಯೋಜನ ಪಡೆದುಕೊಂಡಿರುವುದನ್ನು ನೆನಪಿಸಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದರೆ ಜನರಿಗೆ ಸಿಗುವ ಗ್ಯಾರೆಂಟಿ ಯೋಜನೆಗಳ ಬಗ್ಗೆಯೂ ತಿಳಿಸಿ ಎಂದರು.
ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕೆಪಿಸಿಸಿ ಪ್ರ. ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಶೆಟ್ಟಿ, ಸಂಯೋಜಕ ಪಿ.ಪಿ. ವರ್ಗೀಸ್, ಸರ್ವೋತ್ತಮ ಗೌಡ, ವೆಂಕಪ್ಪ ಗೌಡ, ಬಾಲಕೃಷ್ಣ ಬಳ್ಳೇರಿ, ವಿಜಯ್ ಕುಮಾರ್ ಸೊರಕೆ, ಕೆ.ಪಿ. ತೋಮಸ್, ಡಾ. ರಘು, ಜಿ. ಕೃಷ್ಣಪ್ಪ, ಯೂತ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್, ಉಷಾ ಅಂಚನ್, ಫಝಲ್, ಗಣೇಶ್ ಕೈಕುರೆ, ಜಯರಾಜ್, ಆಶಾ ಲಕ್ಷ್ಮಣ್, ಕಿರಣ್ ಬುಡ್ಲೆಗುತ್ತು, ಶರೀಫ್, ಸತೀಶ್ ಮೊದಲಾದವರು ಉಪಸ್ಥಿತರಿದ್ದರು.