ಬೆಳ್ತಂಗಡಿ, ಏ. 20(DaijiworldNews/AA): ಈ ಹಿಂದೆ ಪುತ್ತೂರು ಮತ್ತು ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ಬಳಿಕ ಬೆಳ್ತಂಗಡಿ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 14 ವರ್ಷ ಕರ್ತವ್ಯ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದ, ಮಂಗಳೂರು ತಲಪಾಡಿ ಕೆ.ಸಿ. ರೋಡ್ ನಿವಾಸಿ ಡಾ.ಆದಂ ಉಸ್ಮಾನ್ (61) ಅಲ್ಪಕಾಲದ ಅಸೌಖ್ಯದಿಂದ ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ 5.30ಕ್ಕೆ ಅವರ ಸ್ವಂತ ಊರಾದ ಕಡಬದಲ್ಲಿ ನಡೆಯಲಿದೆ. ಹಾಗೂ ಕಡಬ ಕೇಂದ್ರ ಜುಮಾ ಮಸೀದಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.