ಮಂಗಳೂರು, ಏ.21(DaijiworldNews/AA): ದೇಶದಲ್ಲಿ ಬೆಲೆ ಏರಿಕೆ, ಆರ್ಥಿಕ ಅಸಮಾನತೆ, ನಿರುದ್ಯೋಗ ಸಮಸ್ಯೆ ಕಾರಣ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನಾಕ್ರೋಶ ಸ್ಫೋಟಗೊಳ್ಳುತ್ತದೆ. ಎನ್ ಡಿಎ ಮತ್ತೆ ಬಹುಮತ ಗಳಿಸುವುದಿಲ್ಲ ಎಂದು ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಆರ್ಥಿಕ ಅಸಮಾನತೆ ಏರಿಕೆಯಾಗಿದೆ. ಪ್ರಧಾನಿ ಮೋದಿಯವರ ಆಡಳಿತಾವಧಿಯಲ್ಲಿ ಶೇಕಡ 1ರಷ್ಟು ಜನರಲ್ಲಿ ದೇಶದ ಸಂಪತ್ತು ಶೇಖರಣೆ ಯಾಗಿದೆ. ನಿರುದ್ಯೋಗದ ಪ್ರಮಾಣ ಹೆಚ್ಚಾಗಿದ್ದು, ಜಗತ್ತಿನ ಹಲವು ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದ ಬಡತನ ಪ್ರಮಾಣ ಕಳೆದ 10 ವರ್ಷಗಳಲ್ಲಿ ಗರಿಷ್ಠ ಪ್ರಮಾಣಕ್ಕೆ ಏರಿದೆ. ಪೆಟ್ರೋಲ್ ಸೇರಿದಂತೆ ಇಂಧನ ಬೆಲೆ ಅಧಿಕವಾಗಿದೆ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ ಜನಸಾಮಾನ್ಯರು ಕಷ್ಟ ಪಡುವಂತಾಗಿದೆ ಎಂದು ಹೇಳಿದರು.