ಉಡುಪಿ,ಏ.22(DaijiworldNews/AK): ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿದ್ದು, ಅದರಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನವು ಏಪ್ರಿಲ್ 26 ರಂದು ನಡೆಯಲಿದೆ.
18 ವರ್ಷ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳು ಮತದಾನ ಮಾಡುವುದು ಸಂವಿಧಾನ ಬದ್ಧ ಹಕ್ಕು ಆಗಿದ್ದು, ಈ ಸಂದರ್ಭದಲ್ಲಿ ಬಲಾಢ್ಯ ಪ್ರಜಾಪ್ರಭುತ್ವ ರಾಷ್ಟ ನಿರ್ಮಾಣಕ್ಕಾಗಿ ಎಲ್ಲ ವಿದ್ಯಾರ್ಥಿಗಳು ಮತದಾನ ಕಾರ್ಯದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಚುನಾವಣಾ ಆಯೋಗವು ಏ. 26 ರಂದು ರಜೆ ಘೋಷಿಸಿರುತ್ತದೆ.
ಆದ್ದರಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ತರಬೇತಿ ನಡೆಸುತ್ತಿರುವ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳನ್ನು ಮತದಾನ ದಿನದಂದು ಬಂದ್ ಮಾಡಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳು ಮತ ಚಲಾಯಿಸಲು ಅವಕಾಶ ಕಲ್ಪಿಸುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.