ಮಂಗಳೂರು, ಏ. 23(DaijiworldNews/AK): 2024ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏ.23ರವರೆಗೆ ಜಿಲ್ಲೆಯಲ್ಲಿ 5,66,82,798 ರೂಪಾಯಿ ಮೌಲ್ಯದ 1,42,751 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ .
8,89,950 ರೂ. ಮೌಲ್ಯದ 16.4 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 1,264 ಎಫ್.ಐ.ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.